ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಕೌಶಲಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗೆ ಉಚಿತ ಕೌಶಲಾಭಿವೃದ್ದಿ ತರಬೇತಿ ಆಯೋಜಿಸಿದೆ.
ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ (ಸಿಎಂಕೆಕೆವೈ) ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ, ಯುವತಿಯರಿಗೆ ತರಬೇತಿಯನ್ನು ನೀಡಲಾಗುತ್ತಿದೆ.
ಡೊಮೆಸ್ಟಿಕ್ ಡೇಟಾ ಎಂಟ್ರಿ ಆಪರೇಟರ್ ತರಬೇತಿಯನ್ನು 260 ಗಂಟೆ ಕಾಲ ನೀಡಲಾಗುವುದು. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ತರಬೇತಿ ಅವಧಿಯಲ್ಲಿ ₹2,500 ಶಿಷ್ಯವೇತನ ನೀಡಲಾಗುವುದು. ನವೆಂಬರ್ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ವಯಸ್ಸು ವಿದ್ಯಾರ್ಹತೆ, ಇತರೆ ದಾಖಲಾತಿಗಳೊಂದಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಣಿ ಸಂಖ್ಯೆ 08182-246054, ಮೊಬೈಲ್ ಸಂಖ್ಯೆ 9449286543, 7760323838 ಅನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.