ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿ, ಆಸ್ಪತ್ರೆಗೆ ಕರೆದೊಯ್ದಾಗ ಶಾಕ್!

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ನಿಂತಿದ್ದ ಬೋಗಿಯೊಂದರಲ್ಲಿ ಗುರುವಾರ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದಾಗ ಮೃತಪಟ್ಟಿರುವುದು ಗೊತ್ತಾಗಿದೆ.
body at smet65 ವರ್ಷದ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು ಆತನನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಸಾಗಿಸಲಾಗಿದೆ. ಅಲ್ಲಿ ವೈದ್ಯರು ವ್ಯಕ್ತಿ ಮೃತಪಟ್ಟಿರುವುದು ಖಚಿತ ಪಡಿಸಿದ್ದಾರೆ. ಹೀಗಾಗಿ, ಶವವನ್ನು ಮೆಗ್ಗಾನ್ ಶವಾಗಾರದಲ್ಲಿ ಇಡಲಾಗಿದೆ.
ಮೃತ ವ್ಯಕ್ತಿಯು ದೃಢ ಕಾಯ, ಸಾಧು ಕಪ್ಪು ಮೈಬಣ್ಣ, 5.7 ಅಡಿ ಎತ್ತರ, ತಲೆಯಲ್ಲಿ ಸುಮಾರು 2 ಇಂಚು ಕಪ್ಪು ಕೂದಲು, ಅರ್ಧ ಇಂಚು ಬಿಳಿ ಗಡ್ಡ ಮೀಸೆ ಬಿಟ್ಟಿದ್ದಾರೆ. ಇವರು ನೀಲಿ ಬಣ್ಣದ ಉದ್ದ ಗೆರೆಯ ತುಂಬು ತಳಿನ ಅಂಗಿ, ಕಪ್ಪ ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಬೆಲ್ಟ್ ಧರಿಸಿದ್ದಾರೆ. ಮಾಹಿತಿ ಪತ್ತೆಯಾದರೆ ರೈಲ್ವೆ ಪೊಲೀಸ್ ಠಾಣೆ ಸಬ್ ಇನ್‍ಸ್ಪೆಕ್ಟರ್ 08182 222974, ಮೊಬೈಲ್ 9480802124 ಸಂಪರ್ಕಿಸುವಂತೆ ತಿಳಿಸಲಾಗಿದೆ.

error: Content is protected !!