ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್, ಡಿಎ ಹೆಚ್ಚಿಸಿ ಸರ್ಕಾರ ಆದೇಶ, ಯಾರ‌್ಯಾರಿಗೆ ಅನ್ವಯ?

 

 

ಸುದ್ದಿ ಕಣಜ.ಕಾಂ | KARNATAKA | DEARNESS ALLOWANCE
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ದೀಪಾವಳಿ ಕೊಡುಗೆ ನೀಡಿದ್ದು, 2021ರ ಜುಲೈ 1ರಿಂದಲೇ ಪೂರ್ವಾನ್ವಯ ಆಗುವಂತೆ ನೌಕರರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿ ಬುಧವಾರ ಆದೇಶ ಹೊರಡಿಸಲಾಗಿದೆ.
ತುಟ್ಟಿ ಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.21.50 ರಿಂದ ಶೇ.24.50ಗೆ ಪರಿಷ್ಕರಿಸಿ ಮಂಜೂರು ಮಾಡುವಂತೆ ಸರ್ಕಾರ ಆದೇಶಿಸಿದೆ.
ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಕೆ.ಉಮಾ ಅವರು ಆದೇಶ ಹೊರಡಿಸಿದ್ದು, ತುಟ್ಟಿ ಭತ್ಯೆ ಮಂಜೂರು ಮಾಡುವಂತೆ ನಿರ್ದೇಶನ ನೀಡಿದ್ದಾರೆ.

DAನಿವೃತ್ತಿ ಹೊಂದಿದ ನೌಕರರಿಗೂ ಅನ್ವಯ
ರಾಜ್ಯ ಸರ್ಕಾರದ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ವೇತನದಾರರಿಗೂ ಈ ಆದೇಶ ಅನ್ವಯವಾಗಲಿದೆ.
ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೆ ಈ ಆದೇಶದನ್ವಯ ತುಟ್ಟಿ ಭತ್ಯೆ ಸೌಲಭ್ಯ ಪ್ರಾಪ್ತವಾಗಲಿದೆ.
ಅದೇ ರೀತಿ, ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕೆ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಜಾರ್ಚ್ ನೌಕರರು ಹಾಗೂ ಸರ್ಕಾರದಿಂದ ಸಹಾಯ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.
ಯುಜಿಸಿ, ಎಐಸಿಟಿಇ, ಐಸಿಎಆರ್, ಎನ್‍ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‍ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ.

https://www.suddikanaja.com/2020/11/24/epf-pension-amount/

error: Content is protected !!