ARECANUT | ಅಡಿಕೆ ಬೆಳೆಗಾರರ ಪರ ನಿಂತ ಸಚಿವ ಆರಗ ಜ್ಞಾನೇಂದ್ರ, ಸಂಪುಟದಲ್ಲಿ ಈ ಎಲ್ಲ ವಿಷಯ ಪ್ರಸ್ತಾಪದ ಭರವಸೆ, ಏನೆಲ್ಲ ಹೇಳಿದ್ರು?

 

 

ಸುದ್ದಿ ಕಣಜ.ಕಾಂ | KARNATAKA | ARECANUT
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಆಯ್ದ ಕೆಲವು ಭಾಗಗಳಲ್ಲಿನ ತೋಟಗಳಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಹೆಚ್ಚಾಗಿದ್ದು, ಅದರ ನಿಯಂತ್ರಣಕ್ಕೆ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.

Araga visit thirthahalli
ತೀರ್ಥಹಳ್ಳಿಯ ನಾಲೂರು ಗ್ರಾಮಕ್ಕೆ ಭೇಟಿ‌ ನೀಡಿದ ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ.

ತೀರ್ಥಹಳ್ಳಿಯ ನಾಲೂರು ಗ್ರಾಮಕ್ಕೆ ಹೊಂದಿಕೊಂಡಂತಿರುವ ತೋಟಗಳಿಗೆ ತೋಟಗಾರಿಕೆ ಬೆಳೆಗಾರರು, ಕೃಷಿ ಸಂಶೋಧಕರು, ವಿಜ್ಞಾನಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾತನಾಡಿದರು.
ಎಲೆ ಚುಕ್ಕೆ ರೋಗದಿಂದ ಬಾಧಿತರಾಗಿರುವ ತೋಟಗಾರಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಭಾರೀ ವರ್ಷಧಾರೆ ಕಾರಣದಿಂದಾಗಿ ಸಕಾಲಕ್ಕೆ ರೋಗ ತಡೆಗೆ ಔಷಧ ಸಿಂಪಡಣೆ ಸಾಧ್ಯ ಆಗಿಲ್ಲ. ಹೀಗಾಗಿ, ರೋಗ ಹತೋಟಿಗೆ ಬರುತ್ತಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಮಳೆ ಕಡಿಮೆ ಆಗುತ್ತಿದ್ದಂತೆ ಹಾಗೂ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಬಿಸಿಲು ಬಿದ್ದಲ್ಲಿ ಸಹಜವಾಗಿ ಈ ರೋಗ ನಿಯಂತ್ರಣಕ್ಕೆ ಬರಲಿದೆ ಎಂದರು.

READ | ಪದವಿ ಇದ್ದರೆ ಸಾಕು ಇಲ್ಲಿದೆ ಉದ್ಯೋಗದ ಸುವರ್ಣ ಅವಕಾಶ, ಎಫ್.ಎಸ್.ಎಸ್.ಎ.ಐನಲ್ಲಿ 225 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಕಡಿಮೆ ಬೆಲೆಯಲ್ಲಿ ಔಷಧಕ್ಕೆ ಪ್ರಯತ್ನ
ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕೆ ಅಗತ್ಯವಿರುವ ಔಷಧಕ್ಕೆ ಅಧಿಕ ಬೆಲೆ ಇದೆ. ಮಾರುಕಟ್ಟೆಯಲ್ಲಿ ಈ ಔಷಧ ಕಡಿಮೆ ಬೆಲೆಗೆ ದೊರಕುವಂತೆ ಪ್ರಯತ್ನಿಸಲಾಗುವುದು. ಔಷಧ ಖರೀದಿಗೆ ಸರ್ಕಾರದಿಂದ ಸಹಾಯ ಧನ ನೀಡುವ ಆದೇಶ ನೀಡಲಾಗುವುದು ಎಂದರು.
ದೋಟಿ ಖರೀದಿಗೆ ಸಹಾಯ ಧನ
ಔಷಧ ಸಿಂಪರಣೆಗೆ ಸಕಾಲದಲ್ಲಿ ಕೊನೆಗಾರರು ಸಿಗದಿರುವುದರಿಂದ ಇತ್ತೀಚೆಗೆ ಸಂಶೋಧಿಸಿರುವ ಹಗುರವಾದ ದೋಟಿಯನ್ನು ಖರೀದಿಸಲು ಸರ್ಕಾರ ಸಹಾಯ ಧನ ನೀಡುವಂತೆ ಅಥವಾ ಕೃಷಿ ಇಲಾಖೆಯಿಂದಲೇ ಪೂರೈಸಲು ಮುಖ್ಯಮಂತ್ರಿಗಳಿಗೆ ಸಂಪುಟ ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಔಷಧವನ್ನು ಅಧಿಕ ಬೆಲೆಗೆ ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಯವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ, ದಿಢೀರ್ ದಾಳಿ ನಡೆಸಲಾಗುವುದು ಎಂದು ಹೇಳಿದರು.
ಕೃಷಿ ವಿಜ್ಞಾನಿ ಡಾ.ಹೇಮ್ಲಾ ನಾಯ್ಕ್, ಡಾ. ಗಂಗಾಧರ ನಾಯ್ಕ್, ಡಾ.ನಾಗರಾಜ್ ಅಡಿವೆಪ್ಪರ್, ಡಾ. ದೇಶಮುಖ್, ಡಾ.ರವಿಕುಮಾರ್, ಡಾ.ನಿರಂಜನ್ ಕೇಶವಾಪುರ, ಡಾ.ರಾಮಚಂದ್ರ ಮಡಿವಾಳರ್, ಸಿದ್ಧಲಿಂಗೇಶ್, ಪ್ರದೀಪ್ ಉಪಸ್ಥಿತರಿದ್ದರು.

https://www.suddikanaja.com/2021/10/04/disease-in-arecanut/

error: Content is protected !!