ಎಫ್.ಡಿ.ಎ., ಎಸ್.ಡಿ.ಎ ಸೇರಿದಂತೆ 6,000 ಹುದ್ದೆಗಳ ನೇಮಕಾತಿಗೆ ಕೆಪಿಎಸ್‍ಸಿ ಗ್ರೀನ್ ಸಿಗ್ನಲ್

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಉದ್ಯೋಗ ನಿರೀಕ್ಷೆಯಲ್ಲಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್.ಸಿ) ಖುಷಿಯ ಸುದ್ದಿಯೊಂದನ್ನು ನೀಡಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 6,000 ಹುದ್ದೆಗಳ ನೇಮಕಾತಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ವಯೋಮಿತಿ ಮೀರುವ ಭೀತಿಯಲ್ಲಿ ಅಭ್ಯರ್ಥಿಗಳ ಮೊಗದಲ್ಲಿ ನಗೆ ಮೂಡಿದೆ.

ರಾಜ್ಯದಲ್ಲಿ ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪೂರ್ವ ತಯಾರಿ ಮಾಡುತ್ತಿದ್ದಾರೆ. ಆದರೆ, ಕೊರೊನಾ ವೈರಸ್ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ನೇಮಕಾತಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಎಲ್ಲ ಸವಾಲುಗಳ ನಡುವೆಯೂ ನಾಲ್ಕು ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮವಾಗಿದೆ. ಎಲ್ಲವೂ ಅಂದುಕೊಂಡಂತೆ ಆದ್ದಲ್ಲಿ ಶೀಘ್ರವೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1ರಂದು ಕೆಪಿಎಸ್.ಸಿಯು ನೇಮಕಾತಿ ಮಾಹಿತಿಯನ್ನು ಪ್ರಕಟಿಸಿದೆ.

READ | ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ

ಯಾವ್ಯಾವ ಇಲಾಖೆಗಳಲ್ಲಿ ನೇಮಕಾತಿ
ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ಶಿಕ್ಷಕರ ನೇಮಕ, ಹಿಂದುಳಿದ ಇಲಾಖೆ, ಲೋಕೋಪಯೋಗಿ ಇಲಾಖೆ, ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಸೇರಿದಂತೆ ನಾನಾ ಇಲಾಖೆಗಳಲ್ಲಿ ಉದ್ಯೋಗ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳ ಪಾಲಿಗೆ ಇದೊಂದು ಸದವಕಾಶವಾಗಿದ್ದು, ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಬಹುದು.

ಹುದ್ದೆಗಳ ಹೆಸರು ಖಾಲಿ ಹುದ್ದೆಗಳ ಸಂಖ್ಯೆ
ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು 150
ವಸತಿ ಶಾಲೆ ಶಿಕ್ಷಕರು  826
ಬಿಸಿಎಂ ಹಾಸ್ಟೆಲ್ ವಾರ್ಡನ್ 422
ಫಿಟ್ಟರ್, ಮೆಕ್ಯಾನಿಕಲ್, ಟರ್ನರ್ 769
ಎಫ್.ಡಿ.ಎ, ಎಸ್.ಡಿ.ಎ  2,300
ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್(ಸಿವಿಲ್)  660
ಕಿರಿಯ ಎಂಜಿನಿಯರ್  330

KPSC RECRUITEMENT STATUS

https://www.suddikanaja.com/2021/09/27/job-opportunity-to-all-in-ssc/

error: Content is protected !!