ಕುವೆಂಪು ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಿಗೆ ಅಂತರ ರಾಷ್ಟ್ರೀಯ ಮನ್ನಣೆ

 

 

ಸುದ್ದಿ ಕಣಜ.ಕಾಂ | KARNATAKA | EDUCATION CORNER
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಎಸ್.ಕೆ.ನರಸಿಂಹಮೂರ್ತಿ ಅವರು ಅಲಹಾಬಾದ್ ಮೂಲದ ಪ್ರತಿಷ್ಠಿತ ಅಂತರ ರಾಷ್ಟ್ರೀಯ ಭೌತಿಕ ವಿಜ್ಞಾನಗಳ ಅಕಾಡೆಮಿಯ 2021ರ ಅಸೋಸಿಯೇಟ್ ಫೆಲೋಷಿಪ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇತ್ತೀಚೆಗೆ ನಡೆದ ಭೌತಿಕ ವಿಜ್ಞಾನಗಳ ಅಕಾಡೆಮಿಯ 26ನೇಯ ವಾರ್ಷಿಕ ಸಮ್ಮೇಳನದಲ್ಲಿ ಕಾರ್ಯಕಾರಿ ಸಮಿತಿಯು ಪ್ರಶಸ್ತಿಯನ್ನು ಪ್ರಕಟಿಸಿದ್ದು, ನರಸಿಂಹಮೂರ್ತಿ ಅವರು ಗಣಿತಶಾಸ್ತ್ರ ವಿಷಯಕ್ಕೆ ನೀಡಿರುವ ಅಮೂಲ್ಯವಾದ ಕೊಡುಗೆಯನ್ನು ಪರಿಗಣಿಸಿ ಗೌರವ ನೀಡಲಾಗಿದೆ ಎಂದು ಕಾರ್ಯದರ್ಶಿ ಪ್ರೊ.ಪಿ.ಎನ್. ಪಾಂಡೆ ತಿಳಿಸಿದ್ದಾರೆ.

ಗಣಿತಶಾಸ್ತ್ರದಂತಹ ಕಠಿಣ ವಿಷಯದಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿರುವ ಪ್ರೊ.ನರಸಿಂಹಮೂರ್ತಿ ಅವರು ವಿಶ್ವವಿದ್ಯಾಲಯದ ಘನತೆಯನ್ನು ಹೆಚ್ಚಿಸಿದ್ದಾರೆ. ಇವರ ಸಾಧನೆ ವಿಶ್ವವಿದ್ಯಾಲಯದ ಸಂಶೋಧನಾ ಚಟುವಟಿಕೆಗಳಿಗೆ ಸ್ಫೂರ್ತಿಯಾಗಲಿ ಎಂದು ಕುಲಪತಿ ಪ್ರೊ..ಬಿ.ಪಿ ವೀರಭದ್ರಪ್ಪ ಅಭಿನಂದಿಸಿದ್ದಾರೆ.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/10/23/kuvempu-university-two-scientist-secured-place-in-top-2-percent-of-world/

error: Content is protected !!