ಸುದ್ದಿ ಕಣಜ.ಕಾಂ | TALUK | RAIN FALL
ಸಾಗರ: ತಾಲೂಕಿನ ತ್ಯಾಗರ್ತಿಯ ನೀಚಡಿ ಗ್ರಾಮದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ನಡೆದಿದೆ.
ಗ್ರಾಮದ ಕೆ.ಕೆ.ನಾಗರಾಜ್ ಎಂಬುವವರ ಮನೆಗೆ ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆಯಲ್ಲಿ ಬಿರುಕು ಉಂಟಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಿತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.