ಸುದ್ದಿ ಕಣಜ.ಕಾಂ | DISTRICT | SHIVAMOGGA DASARA
ಶಿವಮೊಗ್ಗ: ನಗರದ ಎಚ್.ಪಿ.ಸಿ. ಚಿತ್ರಮಂದಿರದಲ್ಲಿ ಅಕ್ಟೋಬರ್ 8ರಂದು ಆಯೋಜಿಸಿರುವ ದಸರಾ ಚಲನಚಿತ್ರೋತ್ಸವಕ್ಕೆ ಕನ್ನಡ ಚಿತ್ರರಂಗದ ನಟರು ಆಗಮಿಸಲಿದ್ದಾರೆ.
ಮಹಾನಗರ ಪಾಲಿಕೆ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ ಚಿತ್ರ ಸಮಾಜಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಚಲನಚಿತ್ರ ನಿರ್ದೇಶಕ, ಸಂಗೀತ ನಿರ್ದೇಶಕ, ನಟ ವಿ.ಮನೋಹರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಗೀತ ನಿರ್ದೇಶಕ, ಗಾಯಕ, ಬಿಗ್ ಬಾಸ್ಖ್ಯಾತಿಯ ವಾಸುಕಿ ವೈಭವ್, ಹಿರಿತೆರೆ, ಕಿರುತೆರೆ ಕಲಾವಿದರಾದ ವೀಣಾ ಸುಂದರ್, ಸುಂದರ್, ಶಿವಮೊಗ್ಗ ರಾಮಣ್ಣ ಆಗಮಿಸಲಿದ್ದಾರೆ.
ಉದ್ಘಾಟನೆಯ ನಂತರ ಚಿತ್ರೋತ್ಸವದ ಮೊದಲ ಚಿತ್ರವಾಗಿ ವಾಸುಕಿ ವೈಭವ್ ಸಂಗೀತ ನಿರ್ದೇಶನದ ರಾಮರಾಮರೇ ಪ್ರದರ್ಶನಗೊಳ್ಳಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ಗನ್ನಿ, ಆಯುಕ್ತ ಚಿದಾನಂದ ವಟಾರೆ ಪ್ರಮುಖರು ಭಾಗವಹಿಸಲಿದ್ದಾರೆ.
ಪ್ರದರ್ಶನಗೊಳ್ಳಲಿರುವ ಚಿತ್ರಗಳು
ಏಳು ದಿನಗಳ ಕಾಲ ನಡೆಯುವ ಈ ಚಿತ್ರೋತ್ಸವದಲ್ಲಿ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಅ.9ರಂದು ಎಚ್ಪಿಸಿ ಚಿತ್ರಮಂದಿರದಲ್ಲಿ ಯುವರತ್ನ, ಅ.10ರಂದು ಎಚ್ಪಿಸಿ ಚಿತ್ರಮಂದಿರದಲ್ಲಿ ಪ್ರೀಮಿಯರ್ ಪದ್ಮಿನಿ, 11ರಂದು ಎಚ್ಪಿಸಿ ಚಿತ್ರಮಂದಿರದಲ್ಲಿ ಹೆಬೆಟ್ ರಾಮಕ್ಕ, 12ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, 13ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿರಾಜಕುಮಾರ ಹಾಗೂ 14ರಂದು ವೀರಭದ್ರೇಶ್ವರ ಚಿತ್ರ ಮಂದಿರದಲ್ಲಿ ಕೃಷ್ಣ ಟಾಕೀಸ್ ಪ್ರದರ್ಶನಗೊಳ್ಳಲಿದೆ.
ಶಿವಮೊಗ್ಗ ದಸರಾ ರೂಪುರೇಷೆ ಪ್ರಕಟ, ಷರತ್ತುಗಳಡಿ ನಡೆಯಲಿದೆ ಹಬ್ಬ ಆಚರಣೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ