ಸುದ್ದಿ ಕಣಜ.ಕಾಂ | TALUK | POWER CUT
ಶಿವಮೊಗ್ಗ: ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಂಸಿಎಫ್ 3, 4, 9, 17, 18 ಮತ್ತು 20 ಮಾರ್ಗಗಳಡಿ ಬರುವ ಪ್ರದೇಶಗಳಡಿ ಅಕ್ಟೋಬರ್ 31 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
READ | ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಶಿವಮೊಗ್ಗ ನಂಟು, ಮುಗಿಲುಮುಟ್ಟಿದ ಅಭಿಮಾನಿಗಳ ಆಕ್ರಂದನ, ಸಕ್ರೆಬೈಲಿಗೆ ಅಂತಿಮ ಭೇಟಿ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಮಾಚೇಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ, ಮೆ.ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್ಆರ್ಪಿ ಕಾಲೊನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.