ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್‌ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 8ರಂದು ಬೆಳಗ್ಗೆ 11:30ರಿಂದ ಸಂಜೆ 04:30ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನವಿ ಮಾಡಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಎಲ್.ಐ.ಸಿ ಆಫೀಸ್, ತೆರಿಗೆ ಕಚೇರಿ, ಗೋಪಾಳ ಮುಖ್ಯ ರಸ್ತೆ, ಮೋರ್ ಅಕ್ಕಪಕ್ಕ, ಗೋಪಾಳ ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಅಲ್‍ ಹರೀಮ್ ಲೇಔಟ್, ಕೆಎಚ್‍ಬಿ ಕಾಲೊನಿ, ಪ್ರೆಸ್ ಕಾಲೋನಿ, 100 ಅಡಿ ರಸ್ತೆ ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!