ಸುದ್ದಿ ಕಣಜ.ಕಾಂ | CITY | PRICE HIKE
ಶಿವಮೊಗ್ಗ: ನಗರದ ಗಾಂಧಿ ಪಾರ್ಕ್ ನಲ್ಲಿರುವ ಗಾಂಧೀಜಿ ಅವರ ಪ್ರತಿಮೆಯ ಮುಂದೆ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಏಕಾಂಗಿ ಹೋರಾಟ ನಡೆಸಿದರು.
ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ ಮತ್ತು ದಿನಬಳಕೆ ವಸ್ತುಗಳ ಬೆಲೆಯ ವಿರುದ್ಧ ಶಶಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೈಸರ್ಗಿಕ ಸಂಪನ್ಮೂಲಗಳಿಗೆ ಒತ್ತು ನೀಡಿ
ನೈಸರ್ಗಿಕವಾಗಿ ಲಭ್ಯವಿರುವ ಸೌರಶಕ್ತಿಯನ್ನು ಬಳಸಿಕೊಳ್ಳುವುದಕ್ಕೆ ಸರ್ಕಾರ ಒತ್ತು ನೀಡಬೇಕು. ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕುಟುಂಬಗಳಿಗೆ ಉಚಿತ ಎಲೆಕ್ಟ್ರಿಕ್ ಸ್ಟೌವ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.