ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲೆಯಲ್ಲಿ ಹೊಸದಾಗಿ ಉದ್ದಿಮೆ ಆರಂಭಿಸಲು ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯಮಶೀಲತಾ ಅರಿವು ಮೂಡಿಸುವ ಒಂದು ದಿನದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಸಕ್ತರು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
READ | ನಿತ್ಯವೂ ಬಳಸುವ `ಮಾಫಿಯಾ’ ಪದದ ಹಿಂದಿದೆ ರೋಚಕ ಕಥೆ, ತಿಳಿದುಕೊಳ್ಳಲು ಇದನ್ನು ಓದಿ
ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತು ಉದ್ಯಮಶೀಲತಾ ಅರಿವು ಮೂಡಿಸುವುದಕ್ಕಾಗಿ ನವೆಂಬರ್ ಅಂತ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಸಕ್ತರು ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಪ್ಪನಾಯಕ ಸಂಕಿರಣ, 3ನೇ ಮಹಡಿ, ನೆಹರೂ ರಸ್ತೆ, ಶಿವಮೊಗ್ಗ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 23 ರೊಳಗೆ ಈ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222802 ಅನ್ನು ಸಂಪರ್ಕಿಸಬಹುದು.