ಸುದ್ದಿ ಕಣಜ.ಕಾಂ | TALUK | CRIME NEWS
ಶಿಕಾರಿಪುರ: ಹೋರಿ ಚುಚ್ಚಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ದೊಡ್ಡಕೇರಿ ಬಡಾವಣೆಯಲ್ಲಿ ಭಾನುವಾರ ಸಂಭವಿಸಿದೆ.
ಹೊನ್ನಾಳಿ ತಾಲೂಕಿನ ಎಚ್.ಕಡದಕಟ್ಟೆಯ ರಾಕೇಶ್ (25) ಮೃತ ಯುವಕ. ದೊಡ್ಡಕೇರಿ ಬಡಾವಣೆಯಲ್ಲಿ ಭಾನುವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯನ್ನು ವೀಕ್ಷಿಸುವುದಕ್ಕಾಗಿ ಬಂದಿದ್ದ ರಾಕೇಶ್ ಬೆನ್ನಿಗೆ ಹೋರಿಯು ಕೊಂಬಿನಿಂದ ಚುಚ್ಚಿದ್ದು ಗಾಯಗೊಂಡ ಈತ ಮೃತಪಟ್ಟಿದ್ದಾನೆ. ಶಿಕಾರಿಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಕುಟುಂಬದವರು ಬಂದು ಶವವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/03/10/bull-running-competition-in-sorab/