ಸುದ್ದಿ ಕಣಜ.ಕಾಂ | DISTRICT | HORI HABBA
ಸೊರಬ: ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಸೋಮವಾರ ವಿಜೃಂಭಣೆಯಿಂದ ಹೋರಿ ಹಬ್ಬ ಜರುಗಿತು.
ಅಖಾಡದಲ್ಲಿ ಓಡಿದ ಹೋರಿಗಳ ಪ್ರದರ್ಶನ ವೀಕ್ಷಿಸಲು ಕೆಳಗಿನ ವಿಡಿಯೋ ಲಿಂಕ್ ಮೇಲೆ ಕ್ಲಿಕ್ ಮಾಡಿ (VIDEO REPORT)
ದೀಪಾವಳಿ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಆಚರಿಸಲಾಗುತ್ತದೆ. ಇದನ್ನು ವೀಕ್ಷಿಸುವುದೇ ಒಂದು ರೋಮಾಂಚನ. ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರೀಯರು ಆಗಮಿಸುತ್ತಾರೆ.
READ | ಶಿವಮೊಗ್ಗದಲ್ಲಿ ‘ಪ್ರೇಮ ಮಯ’ ಶೂಟಿಂಗ್, ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೊರಬದಲ್ಲಿ ನಡೆದ ಹೋರಿ ಹಬ್ಬ ಕೂಡ ಹೋರಿ ಪ್ರಿಯರ ಮೈನವಿರೇಳುವಂತೆ ಮಾಡಿತ್ತು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದ ಹೋರಿಗಳು ಓಡಿ ಹೋಗುವ ದೃಶ್ಯ ರೋಮಾಂಚನಕಾರಿಯಾಗಿತ್ತು.
ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿ ಪುನೀತ್ ರಾಜ್ಕುಮಾರ್ ಸವಿನೆನಪಿಗಾಗಿ ಆನವಟ್ಟಿಯ ಪವರ್ ಸ್ಟಾರ್, ಹಿರೇಕಸವಿ ಹಂತಕ, ತಡಸನಹಳ್ಳಿ ಡಾನ್, ಬಿಳಕಿ ಕೆಪಿಆರ್ ಕಿಂಗ್, ಮಾವಲಿ ಗೌಡ್ರು ಮಗ, ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ, ಶಿರಾಳಕೊಪ್ಪದ ವೀರಕೇಸರಿ, ಸೊರಬದ ಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ, ಕೊಡಕಣಿ ಬಸವ, ಯಲವಳ್ಳಿ ಗ್ರಾಮದ ಹೋರಿಗಳಾದ ಪಾಳೇಗಾರ, ಜಮೀನ್ದಾರ, ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ, ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ಹರ್ಷ ವ್ಯಕ್ತಪಡಿಸಿದರು.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
ಪೂರ್ಣ ಸುರಕ್ಷತೆಯೊಂದಿಗೆ ಹೋರಿ ಹಬ್ಬ
ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡೂ ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಲಾಯಿತು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯವರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.
https://www.suddikanaja.com/2021/03/06/issuru-dange-dead/