BREAKING NEWS | ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಪಡಿತರ ಅಕ್ಕಿ ಸೀಜ್, ಒಬ್ಬ ಅರೆಸ್ಟ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಸಮೇತ ಆರೋಪಿಯನ್ನು ಪೊಲೀಸರು ಭಾನುವಾರ ಸಂಜೆ ಹೊಳೆಹೊನ್ನೂರು ಕ್ರಾಸ್ ಬಳಿ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿ ಮನ್ಸೂರುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿರುವ ಕೋಟೆ ಠಾಣೆ ಪೊಲೀಸರು ಅಕ್ಕಿಯನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ.

143 ಕ್ವಿಂಟಾಲ್ ಅಕ್ಕಿ ವಶ

ಶಿವಮೊಗ್ಗದ ಜಾವಳ್ಳಿಯಿಂದ ಕಾಸರಗೋಡಿಗೆ ಅಕ್ಕಿ ಸಾಗಿಸುತ್ತಿತ್ತು. ಲಾರಿಯಲ್ಲಿದ್ದ (286 ಬ್ಯಾಗ್) 143 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

error: Content is protected !!