ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕರೊಬ್ಬರು ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ಗಲ್ ನ ಬಾರಂಗಿ ಹೋಬಳಿ ನಾಡ ಕಚೇರಿಯ ಮೇಲೆ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಎಂಬುವವರು ಲಂಚ ಪಡೆಯುವಾಗ ಬಲೆಗೆ ಬಿದಿದ್ದಾರೆ.
FOLLOW US copy

ಬಿಳಿಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರಿನ ವ್ಯಕ್ತಿಯೊಬ್ಬರಿಗೆ ಆಸ್ತಿ, ಹಿಸ್ಸೆ ಮಾಡಿಕೊಡಲು 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ದೂರು ನೀಡಿದ್ದು, ಕಚೇರಿಯಲ್ಲಿಯೇ ?8,000 ಪಡೆಯುತ್ತಿದ್ದಾಗ
ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!