ಬಲೆರೋ ಚಾಲಕನ ನಿರ್ಲಕ್ಷ್ಯಕ್ಕೆ ಕಾರ್ಮಿಕನ ಸಾವು, ಮೆಸ್ಕಾಂ ನೌಕರನಿಗೆ ಗಾಯ

 

 

ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ಮುದ್ದಿನಕೊಪ್ಪ ಕ್ರಾಸ್ ಸಮೀಪ ಸೋಮವಾರ ಬೆಳಗ್ಗೆ ಬಲೆರೋ ವಾಹನವೊಂದು ಊಟಕ್ಕೆ ಕುಳಿತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಗೂ ಮೆಸ್ಕಾಂ ನೌಕರನ ಕಾಲಿಗೆ ಗಾಯಗಳಾಗಿವೆ.
ಆಂಧ್ರಪ್ರದೇಶ ಮೂಲದ ಚಂದ್ರಶೇಖರ್(44) ಎಂಬುವವರು ಮೃತಪಟ್ಟಿದ್ದು, ಶವವನ್ನು ಆತನ ಸಂಬಂಧಿಕರಿಗೆ ಇಂದು ಹಸ್ತಾಂತರ ಮಾಡಲಾಗುತ್ತಿದೆ.

ಬಲೆರೋ ಚಾಲಕ ಶಿವಮೊಗ್ಗ ಮೂಲದ ಕಿರಣ್ ಎಂಬಾತನನ್ನು ಬಂಧಿಸಲಾಗಿದೆ. ಈತ ಶಿವಮೊಗ್ಗದಿಂದ ಸಾಗರದ ಕಡೆಗೆ ಬಲೆರೋ ವಾಹನದಲ್ಲಿ ಹೋಗುತ್ತಿದ್ದ. ಆದರೆ, ವಾಹನವನ್ನು ನಿರ್ಲಕ್ಷ್ಯತನ ಹಾಗೂ ಅತಿ ವೇಗದಿಂದಾಗಿ ಚಲಾಯಿಸಿಕೊಂಡು ಬಂದಿದ್ದು ನಿಯಂತ್ರಣ ತಪ್ಪಿ ಏತ ನೀರಾವರಿ ಕಾಮಗಾರಿಗಾಗಿ ಆಂಧ್ರದಿಂದ ಶಿವಮೊಗ್ಗಕ್ಕೆ ಬಂದಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೆಸ್ಕಾಂ ನೌಕರನ ಕಾಲಿಗೆ ಗಾಯ
ಬಲೆರೋ ವಾಹನ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ಮುಂದೆ ಬರುತ್ತಿದ್ದ ಮೆಸ್ಕಾಂ ನೌಕರ ಪಡುಮಳ್ ಎಂಬುವವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅವರು ಟಿವಿಎಸ್ ನಲ್ಲಿ ಬರುತ್ತಿದ್ದಾಗ ಡಿಕ್ಕಿ ಹೊಡೆದಿದ್ದು ಕಾಲಿಗೆ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/10/01/serial-accident-in-shikaripura-road/

error: Content is protected !!