ಶಿವಮೊಗ್ಗದ ಹಲವೆಡೆ ಎಸಿಬಿ ದಿಢೀರ್ ದಾಳಿ, ಎಲ್ಲೆಲ್ಲಿ ರೇಡ್, ಇಲ್ಲಿದೆ ಮಾಹಿತಿ

 

 

ಸುದ್ದಿ ಕಣಜ.ಕಾಂ | DISTRICT | ACB RAID
ಶಿವಮೊಗ್ಗ: ರಾಜ್ಯದಾದ್ಯಂತ ದಾಳಿ ನಡೆಸಿರುವ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿರುವವರ ಚಳಿ ಬಿಡಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 60ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದ್ದು, ಶಿವಮೊಗ್ಗದಲ್ಲೂ ದಾಳಿ ಮಾಡಲಾಗಿದೆ.
ಶಿವ‌ಮೊಗ್ಗದಲ್ಲಿ ಎರಡು ಕಡೆ ರೇಡ್
ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಅವರಿಗೆ ಸೇರಿರುವ ಶಿವಮೊಗ್ಗದ ಚಾಲುಕ್ಯನಗರ ಮತ್ತು ಗೋಪಾಳ ಬಡಾವಣೆಯಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ, ಕೆಜಿಗಟ್ಟಲೇ ಬಂಗಾರ ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ.
ಇನ್ನೂ ಪರಿಶೀಲನೆ ನಡೆಯುತಿದ್ದು, ಶಿವಮೊಗ್ಗದ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಲಭ್ಯ ಮಾಹಿತಿ ಪ್ರಕಾರ, ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದವರ ಮೇಲೆ ರಾಜ್ಯದಾದ್ಯಂತ ಏಕ ಕಾಲಕ್ಕೆ 408 ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

error: Content is protected !!