ಶಿವಮೊಗ್ಗದಲ್ಲಿ ನಡೆಯಲಿದೆ ಒಕ್ಕಲಿಗರ ವಧು-ವರರ ಸಮಾವೇಶ, ಹೆಸರು ನೋಂದಾಯಿಸಲು ಸಂಪರ್ಕಿಸಿ

 

 

ಸುದ್ದಿ ಕಣಜ.ಕಾಂ | DISTRICT | RELIGIUOS
ಶಿವಮೊಗ್ಗ: ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನವೆಂಬರ್ 8ರಂದು ಒಕ್ಕಲಿಗರ ವಧು-ವರರ ಸಮಾವೇಶ ನಡೆಯಲಿದೆ ಎಂದು ಚುಂಚಾದ್ರಿ ಮಹಿಳೆ ವೇದಿಕೆ ಅಧ್ಯಕ್ಷೆ ಭಾರತಿ ರಾಮಕೃಷ್ಣ ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಚುಂಚಾದ್ರಿ ಮಹಿಳಾ ವೇದಿಕೆ, ಚುಂಚಾದ್ರಿ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಿಂದ ಆಯೋಜಿಸಿರುವ ಸಮಾವೇಶವು ಅಂದು ಬೆಳಗ್ಗೆ 9.30 ಗಂಟೆಗೆ ಆರಂಭವಾಗಲಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಬುಧವಾರ ಹೇಳಿದರು.

ಸಮಾವೇಶ ಸಂಪೂರ್ಣ ಉಚಿತವಾಗಿದ್ದು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ.

ಈ ಮಾಹಿತಿಗಳನ್ನು ಮುಂಚೆಯೇ ನೀಡತಕ್ಕದ್ದು
ಸಮಾಜದ ಮುಖಂಡ ಕೆ.ಸಿ.ದಿವಾಕರ್ ಮಾತನಾಡಿ, ವಧು- ವರರೊಂದಿಗೆ ಪೋಷಕರು ಆಗಮಿಸುವುದು ಕಡ್ಡಾಯವಾಗಿದೆ. ಸಮಾವೇಶದಲ್ಲಿ ಭಾಗವಹಿಸಲು ಇಚ್ಛಿಸುವವರು ಮುಂಚೆಯೇ ಆಧಾರ್ ಕಾರ್ಡ್, ಫೋಟೊ ಇತ್ಯಾದಿ ಮಾಹಿತಿಗಳನ್ನು ನೀಡಬೇಕು ಎಂದು ಹೇಳಿದರು.
ಸಮಾವೇಶದಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಟಿ.ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ. ಮಾಹಿತಿಗಾಗಿ 9448193863 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬೇಕು ಎಂದು ತಿಳಿಸಲಾಗಿದೆ.
ಜಿಲ್ಲಾ ಒಕ್ಕಲಿದ ಸಂಘದ ಅಧ್ಯಕ್ಷ ಶ್ರೀಕಾಂತ್, ಪ್ರಮುಖರಾದ ಶಾರದಾ ಶೇಷಗಿರಿ ಗೌಡ, ಚೇತನ್, ಮಮತಾ ಶಿವಣ್ಣ ಉಪಸ್ಥಿತರಿದ್ದರು.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕ್ರೀಡೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್.  ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/07/01/free-bamboo-trees/

error: Content is protected !!