ಡಿ.ಎಸ್.ಅರುಣ್ ಎಂಎಲ್‍ಸಿ ಅಭ್ಯರ್ಥಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಸಂಸದ ರಾಘವೇಂದ್ರ ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಬಿಜೆಪಿ ಹೈಕಮಾಂಡ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದ್ದೇ ಡಿ.ಎಚ್.ಅರುಣ್ ಅವರು ಶನಿವಾರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದೆ. ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್ ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದರು.

READ | ಶಿವಮೊಗ್ಗ ಕೋರ್ಟ್ ನಲ್ಲಿ ಉದ್ಯೋಗ ಅವಕಾಶ, ಮಾಹಿತಿಗಾಗಿ ಇದನ್ನು ಓದಿ

ಬಿಜೆಪಿ ಮತ್ತೆ ಉತ್ತಮ ಕಾರ್ಯಕರ್ತರನ್ನು ಗುರುತಿಸಿದೆ. ಮೊದಲಿನಿಂದಲೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಅನುಭವ ಜೊತೆಗೆ ಪಕ್ಷದ ಹಿರಿಯರ ಆಶೀರ್ವಾದದಿಂದ ಆಯ್ಕೆಯಾಗಿದ್ದಾರೆ. ಹೆಚ್ಚಿನ ಮತದಿಂದ ಗೆದ್ದುಬರಲಿ ಎಂದು ಶುಭ ಹಾರೈಸಿದರು.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರಿಗೆ ಪಕ್ಷದದಿಂದ ಸ್ವಾಗತಿಸಲಾಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಭಾನುಪ್ರಕಾಶ್, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಆಯನೂರು ಮಂಜುನಾಥ್, ಎಸ್.ದತ್ತಾತ್ರಿ ಉಪಸ್ಥಿತರಿದ್ದರು.

error: Content is protected !!