ಶಿವಮೊಗ್ಗದಲ್ಲಿ ಜನಸಂಖ್ಯೆ ಆಧಾರದ ಮೇಲೆ ಪೊಲೀಸ್ ಠಾಣೆ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಅಪರಾಧ ತಡೆ ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈಗಾಗಲೇ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಬರುವ ದಿನಗಳಲ್ಲಿ ಠಾಣೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲೂ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗ, ಭದ್ರಾವತಿ ಕಮಿಷನ್‍ರೇಟ್

ಶಿವಮೊಗ್ಗ- ಭದ್ರಾವತಿ ಕಮೀಷನರೇಟ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಹೀಗಾಗಿಯೇ ಭದ್ರಾವತಿಗೆ ಇನ್ನೊಬ್ಬರು ಐಪಿಎಸ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಎಂದರು.
ಎಫ್.ಎಸ್.ಎಲ್. ಬಗ್ಗೆಯೂ ನಡೆದಿದೆ ಚಿಂತನೆ
ಶಿವಮೊಗ್ಗದಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇರುವುದರಿಂದ ಎಫ್.ಎಸ್.ಎಲ್ (Forensic Science Laboratory) ಆರಂಭಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಪ್ರಸ್ತುತ ಬಳ್ಳಾರಿಯಲ್ಲಿ ಎಫ್.ಎಸ್.ಎಲ್. ಆರಂಭ ಮಾಡಲಾಗುವುದು ಎಂದು ಹೇಳಿದರು.

ಉದ್ಯಮಿಗಳಿಗೆ ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ನಿಟ್ಟಿನಲ್ಲೂ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುವ ಹಾಗೂ ಅವರ ಮೇಲೆ ಯಾವುದಾದರೂ ಆಪಾದನೆಗಳಿದ್ದರೆ ಅಂತಹವರ ಮೇಲೆಯೂ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಕ್ರಮದಲ್ಲಿ ತೊಡಗಿಸಿಕೊಂಡಿದ್ದರೆ ಕ್ರಮ
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಮಾಡಿದೆ. ಸಾಕ್ಷ್ಯಾಧಾರ, ದಾಖಲಾತಿಗಳನ್ನು ಸಂಗ್ರಹಿಸಿ ಜಾರ್ಜ್ ಶೀಟ್ ಸಲ್ಲಿಸಲಾಗುವುದು. ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳು, ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.

https://www.suddikanaja.com/2021/08/07/home-minister-portfolio-to-aaraga-jnanedra/

error: Content is protected !!