ಬಿಟ್ ಕಾಯಿನ್ ಹಗರಣದ ಬಗ್ಗೆ ಸಿದ್ದರಾಮಯ್ಯ ಅವರೇ ಉತ್ತರಿಸಲಿ, ಸಿಎಂ ತಲೆದಂಡ ಬೋಗಸ್ ಸುದ್ದಿ

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಬಿಟ್ ಕಾಯಿನ್ ಪ್ರಕರಣದ ತನಿಖೆ ಸರಿಯಾದ ಹಾದಿಯಲ್ಲೇ ಸಾಗಿದೆ. ಇದನ್ನು ಕಾಂಗ್ರೆಸ್ ದೊಡ್ಡ ಮಟ್ಟದ ರಾಜಕಾರಣ ಮಾಡಲು ಹೊರಟಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ಬಿಟ್ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುವ ಸಾಧ್ಯತೆ ಇದೆ ಎಂದರು.

2018ರಲ್ಲಿ ಬಿಟ್ ಕಾಯಿನ್ ಬಗ್ಗೆ ಪ್ರಸ್ತಾಪಿತ ಆಗುತ್ತಿರುವ ಶ್ರೀಕಿ ಬಂಧನವಾಗಿದ್ದು, ಆಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಈ ಹಗರಣದ ಬಗ್ಗೆ ಅವರೇ ಹೇಳಬೇಕು ಎಂದು ಟಾಂಗ್ ನೀಡಿದರು.

ಶ್ರೀಕಿ ವಿಚಾರಣೆ ಮಾಡದೇ ಬಿಟ್ಟಿದ್ದೇಕೆ?
ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನ ಜತೆ ಶ್ರೀಕಿ ಸಿಕ್ಕಿಬಿದ್ದಿದ್ದು. ವಿಚಾರಣೆ ಮಾಡದೇ ಬಿಟ್ಟು ಕಳಿಸಲಾಗಿತ್ತು. ಇದಕ್ಕೇನು ಕಾರಣ, ಆತನಿಂದ ಇನ್ನೇನು ನಿರೀಕ್ಷಿಸಲಾಗಿತ್ತು ಎಂದು ಪ್ರಶ್ನಿಸಿದರು.
ಶ್ರೀಕಿಯನ್ನು ಬಂಧಿಸಿ ಚಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ. ಇಂಟರ್ ಪೆÇೀಲ್, ಇಡಿ ಸೇರಿದಂತೆ ತನಿಖಾ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಕಾಂಗ್ರೆಸ್ ಈ ವಿಷಯದ ಬಗ್ಗೆ ತನಿಖೆ ಮಾಡಲೇ ಇಲ್ಲ. ಯುಬಿ ಸಿಟಿ ನಲ್ಲಿ ಏನು ನಡೀತು ಅಂತ ಹೇಳಲಿ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ತಲೆದಂಡ ಕಾಂಗ್ರೆಸ್ ಸೃಷ್ಟಿಸಿರುವ ಬೋಗಸ್ ಸುದ್ದಿಯಾಗಿದೆ ಎಂದು ಹೇಳಿದರು.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ CLICK 

https://www.suddikanaja.com/2021/10/10/cycling-against-rape-by-a-bangalore-boy-coming-to-shivamogga/

error: Content is protected !!