ಭದ್ರಾವತಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಸೀಜ್

 

 

ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಹತ್ತಿರ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಇಬ್ಬರನ್ನು ಮಂಗಳವಾರ ಪರಿಶೀಲಿಸಿದ್ದು, ಅವರ ಬಳಿ ಭಾರಿ ಪ್ರಮಾಣದ ಗಾಂಜಾ ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಅನ್ವರ್ ಕಾಲೊನಿ ಕಡೆಯಿಂದ ಜಟ್ ಪಟ್ ನಗರದ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ಪಿ.ಎಸ್.ಐ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳಿಂದ ಅಂದಾಜು 25,000 ರೂ. ಮೌಲ್ಯ ಒಟ್ಟು 1 ಕೆಜಿ 55 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/10/11/20-kg-ganja-seized-in-bhadravathi/

 

error: Content is protected !!