ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ(District Employment Exchange Office)ಯು ನವೆಂಬರ್ 30 ರಂದು ಬೆಳಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೊನಿಯ ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗ ಮೇಳ (mini job fair)’ ವನ್ನು ಏರ್ಪಡಿಸಿದೆ.
READ | ಡಿಪ್ಲೋಮಾ, ತಾಂತ್ರಿಕ ಪದವೀಧರರಿಗೆ ಉದ್ಯೋಗ ಅವಕಾಶ
ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ. 9535312531/ 9482023412 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.