JOB IN SHIVAMOGGA | ಎಸ್‍ಎಸ್‍ಎಲ್‍ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು, ಮಾಸಿಕ ₹12,000 ಸಂಬಳ

 

 

ಸುದ್ದಿ ಕಣಜ.ಕಾಂ‌| DISTRICT | JOB JUNCTION
ಶಿವಮೊಗ್ಗ: ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ(ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ(ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ(ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ(ಸಾಮಾನ್ಯ ಅಭ್ಯರ್ಥಿ) ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಮಾಸಿಕ ಗೌರವ ಸಂಭಾವನೆ ₹12,000 ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

READ | ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ, ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ

ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಪಂ ಸ್ಥಳೀಯ ನಿವಾಸಿಗಳಾಗಿರತಕ್ಕದ್ದು. ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು, ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಹಾಗೂ ಇತರೆ ದಾಖಲಾತಿಗಳನ್ನು ಪಂಚಾಯಿತಿಗೆ ಸಲ್ಲಿಸಲು ಡಿಸೆಂಬರ್ 8 ಕಡೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಆಯಾ ಗ್ರಾ.ಪಂ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ಗ್ರಾ.ಪಂ ಕಾರ್ಯಾಲಯ ಅಥವಾ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182-222905 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ತಿಳಿಸಿದ್ದಾರೆ.

https://www.suddikanaja.com/2021/09/11/tumari-library-close-since-from-three-months/

error: Content is protected !!