JOBS IN SHIVAMOGGA | ಶಿವಮೊಗ್ಗ ಕೋರ್ಟ್ ನಲ್ಲಿ ಉದ್ಯೋಗ ಅವಕಾಶ, ಮಾಹಿತಿಗಾಗಿ ಇದನ್ನು ಓದಿ

 

 

ಸುದ್ದಿ ಕಣಜ.ಕಾಂ‌| DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 7 ಸಂಖ್ಯೆಯ ಪ್ರೋಸೆಸ್ ಜಾರಿಕಾರ(ಪ್ರೋಸೆಸ್ ಸರ್ವರ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ‌ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎ. ಮುಸ್ತಫಾ ಹುಸೇನ್ ತಿಳಿಸಿದ್ದಾರೆ.

READ | ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದ್ದು ಭದ್ರಾವತಿಯಲ್ಲಿ, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್

ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯ ವೆಬ್‍ಸೈಟ್ https://districts.ecourts.gov.in/shivamogga-onlinerecruitment  ಅಥವಾ http://karnatakajudiciary.kar.nic.in/districtrecruitment.asp  ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಆಗಸ್ಟ್ 23 ರಿಂದ ಡಿಸೆಂಬರ್ 30 ರೊಳಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅಭ್ಯರ್ಥಿಗಳು ಹೊಂದಿರಬೇಕಾದ‌‌ ವಯೋಮಿತಿ
ಕನಿಷ್ಠ 18 ವರ್ಷ ಮತ್ತು ಸಾಮಾನ್ಯ ವರ್ಗಕ್ಕೆ ಗರಿಷ್ಠ 35 ವರ್ಷ, 2ಎ, 2ಬಿ, 3ಎ, 3ಬಿ ಗೆ 38 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ 40 ವರ್ಷಗಳ ವಯೋಮಿತಿ (ವಿಧವೆ ಮತ್ತು ಅಂಗವಿಕಲರಿಗೆ 10 ವರ್ಷ ಸಡಿಲಿಕೆ ಹಾಗೂ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು) ಇದೆ.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಯ ಅರ್ಜಿ ಶುಲ್ಕ ₹ 200 ಆಗಿದ್ದು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ₹ 100 ಹಾಗೂ ಪ.ಜಾತಿ, ಪ.ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಪದ ಕಣಜ-14 | ‘ಹ್ಯಾಟ್ರಿಕ್’ ಪದ ಹುಟ್ಟಿಕೊಂಡಿದ್ದು ಹೇಗೆ, ಇದರ ಹಿಂದಿದೆ ಇತಿಹಾಸ

ನಿಗದಿತ ಶುಲ್ಕವನ್ನು ನ್ಯಾಯಾಲಯ  ಮೇಲೆ ನೀಡಲಾದ ವೆಬ್ಸೈಟ್ ಲಿಂಕ್‍ಗಳ ಮುಖಾಂತರ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್‍ಲೈನ್ ಪೇಮೆಂಟ್ ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಯ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿ ಮತ್ತು ಇತರೆ ಹುದ್ದೆಗಳ)(ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ) ನಿಯಮ 2007 ರ ಪ್ರಕಾರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್ಸೈಟ್ ವೀಕ್ಷಿಸಬಹುದು.

https://www.suddikanaja.com/2021/11/18/property-return-parade-at-dar-ground-at-shivamogga/

error: Content is protected !!