ನ್ಯಾಯಾಲಯದಿಂದ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಇಮ್ರಾನ್ ಮುಂಬೈನಲ್ಲಿ ಸೆರೆ

 

 

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ವಿವಿಧ ಪ್ರಕರಣಗಳಲ್ಲಿ ಶಿವಮೊಗ್ಗ ಹಾಗೂ ರಾಜ್ಯದ ಇನ್ನಿತರ ಜಿಲ್ಲೆಗಳ‌ ಪೊಲೀಸರ ಮೋಸ್ಟ್ ವಾಂಟೆಡ್‌ ಲಿಸ್ಟ್ ನಲ್ಲಿರುವ ಆರೋಪಿಯನ್ನು ಭಾನುವಾರ ಮುಂಬೈನಲ್ಲಿ ಬಂಧಿಸಲಾಗಿದೆ.
ಟಿಪ್ಪುನಗರ ನಿವಾಸಿ ಇಮ್ರಾನ್ ಖಾನ್ ಅಲಿಯಾಸ್ ಇಮ್ರಾನ್ (36) ಬಂಧಿತ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

FOLLOW US copy
ನ್ಯಾಯಾಲಯದ ವಾರೆಂಟ್ ಬಳಿಕ ಅರೆಸ್ಟ್
ಇಮ್ರಾನ್ ವಿರುದ್ಧ 2017ರ ಫೆಬ್ರವರಿ 13ರಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 457, 380 ಅಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಆರೋಪಿಯ ಬಂಧನಕ್ಕೆ ನ್ಯಾಯಾಲಯವು ಬಂಧನ ವಾರೆಂಟ್ ಅನ್ನು ಹೊರಡಿಸಿತ್ತು.

READ | ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬರಲಿದೆ `ಅಡಿಕೆ ಸಿಪ್ಪೆ’ಯಿಂದ ತಯಾರಿಸಿದ ಶ್ಯಾಂಪೂ

ಎರಡು ತಂಡಗಳ‌ ಕಾರ್ಯಾಚರಣೆ
ಇಮ್ರಾನ್ ವಿರುದ್ಧ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈತನ ಬಂಧನಕ್ಕಾಗಿ ಕುಂಸಿ ಠಾಣೆಯ ಪಿಐ ಅಭಯ್ ಪ್ರಕಾಶ್ ಸೋಮನಾಳ್ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪಿಐ ಸಂಜೀವ್ ಕುಮಾರ್ ನೇತೃತ್ವದಲ್ಲಿ 2 ವಿಶೇಷ ತಂಡ ರಚಿಸಲಾಗಿತ್ತು. ಇವರು ನಿರಂತರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಬಂಧಿಸಿದ್ದಾರೆ.

https://www.suddikanaja.com/2021/08/29/bike-thieves-gang-arrested-in-shivamogga/

error: Content is protected !!