ಐಟಿಐ ಪಾಸ್ ಆದವರಿಗೆ ಎನ್‍ಪಿಸಿಐಎಲ್‍ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ಯಾವೆಲ್ಲ ಹುದ್ದೆಗಳು ಖಾಲಿ

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಐಟಿಐ (Industrial Training Institute) ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಟ್ರೇಡ್ ಗೆ ಅನುಗುಣವಾಗಿ ವಿವಿಧ ಹುದ್ದೆಗಳ ಭರ್ತಿಗೆ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್‌ ಆಫ್ ಇಂಡಿಯಾ (NPCIL) ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿಗಳ ಮಾಹಿತಿ ಕೆಳಗಿನಂತಿದೆ.

ಎನ್‍ಪಿಸಿಐಎಲ್ ಒಟ್ಟು 250 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 14 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ವಯೋ ಸಡಿಲಿಕೆ ಲಭ್ಯವಿದೆ.

ಆಯ್ಕೆ ಪ್ರಕ್ರಿಯೆ ಹೇಗೆ
ಸಂಬಂಧಪಟ್ಟ ಟ್ರೇಡ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು. ಆಯ್ಕೆಯಾವರಿಗೆ ಸ್ಟೈಫಂಡ್ ಪಾವತಿಸಲಾಗುವುದು. ಅರ್ಹ ಹಾಗೂ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

 ವಿದ್ಯಾರ್ಹತೆ

ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಎಲೆಕ್ಟ್ರ್ರಾನಿಕ್ ಮೆಕ್ಯಾನಿಕ್, ಇನ್‍ಸ್ಟ್ರ್ಯ್ರುಮೆಂಟ್ ಮೆಕ್ಯಾನಿಕ್, ಕಾಪೆರ್ಂಟರ್, ಪ್ಲಂಬರ್, ವೈಯರ್ ಮೆನ್, ಮೆಷಿನಿಸ್ಟ್, ಪೇಂಟರ್, ಡೀಸೆಲ್ ಮೆಕ್ಯಾನಿಕ್ ಹೀಗೆ ವಿವಿಧ ಟ್ರೇಡ್ ಗಳಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು.

NOTIFICATION

WEBSITE

CLICK HERE TO APPLY

https://www.suddikanaja.com/2021/09/19/jobs-available-in-chittaranjan-locomotive-works/

error: Content is protected !!