ಮಾಚೇನಹಳ್ಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ನ.6ರಂದು ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ | CITY | POWER CUT
ಶಿವಮೊಗ್ಗ: ನವೆಂಬರ್ 6ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

READ | ಸೆಂಟ್ರಲ್ ಜೈಲು ಸಿಬ್ಬಂದಿ ಆತ್ಮಹತ್ಯೆಗೆ ಶರಣು, ಕಾರಣವೇನು?

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ವಿದ್ಯುತ್ ವಿತರಣೆ ಕೇಂದ್ರದ ಎಂಸಿಎಫ್-3, 4, 9, 17, 18 ಮತ್ತು 20 ಮಾರ್ಗಗಳ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೊನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ,
ಮೆ.ರಾಮಮೂರ್ತಿ ಮಿನರಲ್ಸ್, ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‍ಆರ್‍ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!