ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT
ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣದ ನಾಮಕರಣದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ರಾಷ್ಟ್ರೀಯ ಬಸವ ದಳ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ರಾಷ್ಟ್ರೀಯ ಬಸವದಳದ ಬೇಡಿಕೆ ಏನು?
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಲ್ಲಮಪ್ರಭು ದೇವರು ಅಥವಾ ಶರಣೆ ಅಕ್ಕಮಹಾದೇವಿ ಅವರ ಹೆಸರು ಇಡಬೇಕು ಎಂದು ದಳದಿಂದ ಒತ್ತಾಯಿಸಲಾಗಿದೆ.
ಬಸವ ಧರ್ಮ ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ.ಮಾತೆ ಗಂಗಾದೇವಿ ಮತ್ತಿತರರು ಉಪಸ್ಥಿತರಿದ್ದರು.
https://www.suddikanaja.com/2021/09/12/shivamogga-airoplane-five-routs-final-to-fly/