ಹಾನಗಲ್ ಆಕಸ್ಮಿಕ ಗೆಲುವು ಕಾಂಗ್ರೆಸ್ ಪಾಲಿಗೆ ಸುನಾಮಿ

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಹಾನಗಲ್ ಗೆಲುವೇ ಕಾಂಗ್ರೆಸ್ ಪಾಲಿಗೆ ಸುನಾಮಿಯಂತೆ ಭಾಸವಾಗುತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.
ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಸಚಿವರು, ಮುಳುಗುವ ಸ್ಥಿತಿಯಲ್ಲಿರುವ ಕಾಂಗ್ರೆಸ್ ಪಾಲಿಗೆ ಹಾನಗಲ್ ಉಪ ಚುನಾವಣೆಯಲ್ಲಿನ ಆಕಸ್ಮಿಕ ಗೆಲುವು ಮುಳುಗುವಾಗ ಸಿಕ್ಕ ಕಡ್ಡಿಯಂತಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಉಪ ಚುನಾವಣೆಯ ಗೆಲುವನ್ನು `ಆಡಳಿತ ವಿರೋಧಿ ಸುನಾಮಿ’ ಎಂದು ವಿಶ್ಲೇಷಿಸಿದ್ದು, ಅದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಚಾಮುಂಡೇಶ್ವರಿ ಚುನಾವಣೆಯ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋಗಿರುವುದು ಮರೆತಿದ್ದಾರೆ ಎಂದರು.

ಉಪ ಚುನಾವಣೆ ಲೆಕ್ಕಾಚಾರದಲ್ಲಿಯೇ ಹೇಳುವುದಾದರೆ, ಕಾಂಗ್ರೆಸ್‍ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್ ನಲ್ಲಿ ಕಡಿಮೆ ಅಂತರದ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಕೂಡ ಪ್ರಾದೇಶಿಕ ಪಕ್ಷವಾಗುತ್ತಿದೆ
ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿಲ್ಲ ಎನ್ನುವುದು ರುಜುವಾತುಗೊಂಡಿದೆ. ಈಗ ಕಾಂಗ್ರೆಸ್ ಕೂಡ ಪ್ರಾದೇಶಿಕ ಪಕ್ಷವಾಗಿ ಮಾರ್ಪಾಟು ಹೊಂದುತಿದ್ದು, ಬಿಜೆಪಿ ಬೃಹತ್ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕ್ರೀಡೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್.  ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/01/26/koo-application-developed-by-indian-got-good-response-from-users/

error: Content is protected !!