ಶಿವಮೊಗ್ಗದಲ್ಲಿ ನಡೆಯಲಿದೆ ಪುನೀತ್ ರಾಜಕುಮಾರ್ ನುಡಿ ನಮನ ಕಾರ್ಯಕ್ರಮ, ಬರಲಿದ್ದಾರೆ ನಟ ನಟಿಯರು

 

 

ಸುದ್ದಿ ಕಣಜ.ಕಾಂ‌ | DISTRICT | PUNEETH RAJAKUMAR
ಶಿವಮೊಗ್ಗ: ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನವೆಂಬರ್ 7ರಂದು ಸಂಜೆ 6 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸದ್ಭಾವನಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಂ.ಶ್ರೀಕಾಂತ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪುನೀತ್ ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅಭಿಮಾನಿಗಳು ಈಗಲೂ ನೋವಿನಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಟ, ನಟಿಯರು ಭಾಗಿ

ಕೋಡಿಹಳ್ಳಿ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ, ಬಸವ ಕೇಂದ್ರದ ಶ್ರೀ ಮರುಳಾಸಿದ್ದ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಸೇರಿದಂತೆ ಕೆಲ ನಟ ನಟಿಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಪ್ರಮುಖರಾದ ಎನ್.ರಮೇಶ್, ನಿರ್ಮಲಾ ಕಾಶಿ, ಜಿ.ವಿಜಯ್ ಕುಮಾರ್, ಜನಾರ್ಧನ ಪೈ ಉಪಸ್ಥಿತರಿದ್ದರು.

https://www.suddikanaja.com/2021/11/01/cannel-road-named-as-puneeth-rajakumar/

error: Content is protected !!