ಸುದ್ದಿ ಕಣಜ.ಕಾಂ | DISTRICT | PROTEST
ಶಿವಮೊಗ್ಗ: ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಧನ ನೀಡದಿದ್ದರೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ.
ರಾಜ್ಯ ಸರ್ಕಾರ ಕೋವಿಡ್ ಅವಧಿಯಲ್ಲಿಯೇ ₹2000 ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇದುವರೆಗೆ ಅದು ಈಡೇರಿಲ್ಲ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಸಂಘಟಿತ ಕಾರ್ಮಿಕರಿಗೆ ಜಿಲ್ಲೆಯಲ್ಲಿ ಸಮರ್ಪಕ ಪರಿಹಾರ ವಿತರಣೆ ಮಾಡಿಲ್ಲ. ಒಂದುವೇಳೆ, ತಕ್ಷಣವೇ ಸರ್ಕಾರ ಜಾಗೃತಗೊಳ್ಳದಿದ್ದರೆ, ಸಂಘದ ಗೌರವಾಧ್ಯಕ್ಷ ಹಾಗೂ ಶಾಸಕ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.