ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಜಿಲ್ಲೆಯಲ್ಲಿ ಶಾಂತವಾಗಿದ್ದ ಕೊರೊನಾ ‘ಅಲೆ’ ಮತ್ತೆ ಉಲ್ಬಣವಾಗಿದೆ. ಒಂದೇ ದಿನ 32 ಜನರಲ್ಲಿ ಸೋಂTTFಕು ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
READ | ಶಿವಮೊಗ್ಗ ದಲ್ಲಿ ಮತ್ತೆ ಕೊರೊನಾ ಭೀತಿ, ಒಂದೇ ಖಾಸಗಿ ಆಸ್ಪತ್ರೆಯಲ್ಲಿ 23ಕ್ಕೂ ಹೆಚ್ಚು ಜನರಿಗೆ ಪಾಸಿಟಿವ್
29 ವಿದ್ಯಾರ್ಥಿಗಳು ಸೇರಿ ಒಟ್ಟು 32 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಅವರನ್ನು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತಿದ್ದಾರೆ.
ಸಾಗರ ರಸ್ತೆಯಲ್ಲಿರುವ ಆಸ್ಪತ್ರೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ನರ್ಸಿಂಗ್ ಪರೀಕ್ಷೆ ಬರೆಯಲು ಬಂದ ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಪತ್ತೆಯಾಗಿದೆ. ಸಾಗರದಲ್ಲಿ ಗುರುವಾರ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ಇನ್ನುಳಿದವು ಶಿವಮೊಗ್ಗ ನಗರದ್ದೇ ಆಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ 76 ಕೊರೊನಾ ಸಕ್ರಿಯ ಪ್ರಕರಣಗಳಿವೆ.