ಸುದ್ದಿ ಕಣಜ.ಕಾಂ | TALUK | POWER CUT
ಶಿವಮೊಗ್ಗ: ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಡಿಸೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಕಟ್
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.