ಸುದ್ದಿ ಕಣಜ.ಕಾಂ | TALUK | HEALTH NEWS
ಭದ್ರಾವತಿ: ಶಿವಮೊಗ್ಗ ನಗರದ ಘಟನೆ ಮಾಸುವ ಮುನ್ನವೇ ಭದ್ರಾವತಿಯಲ್ಲೂ ಇದೇ ಮಾದರಿಯ ಪ್ರಕರಣಗಳು ಪತ್ತೆಯಾಗಿವೆ.
ಭದ್ರಾವತಿಯ ಖಾಸಗಿ ಆಸ್ಪತ್ರೆಯೊಂದಿಗೆ ಸಂಪರ್ಕ ಹೊಂದಿರುವ 24 ನರ್ಸಿಂಗ್ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿಂದೆ ಕೂಡ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ 29 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು.
ಒಂದೇ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿರುವುದರಿಂದ ಹಾಸ್ಟೆಲ್ ಹಾಗೂ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕರ ಪ್ರವೇಶಕ್ಕೆ ಪೂರ್ಣ ನಿರ್ಬಂಧ ಹೇರಲಾಗಿದೆ.
ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಡಿಎಚ್.ಒ ಅವರ ಮಾರ್ಗದರ್ಶನದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಜೊತೆಗೆ, ಸೋಂಕಿತ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಹಲವರ ತಪಾಸಣೆ ಮಾಡಲಾಗುತ್ತಿದೆ. ಆಸ್ಪತ್ರೆಯ ಸಂಪರ್ಕದಲ್ಲಿರುವ ಸಾಕಷ್ಟು ಜನರಿದ್ದು ಅವರಲ್ಲಿ ಭೀತಿ ಶುರುವಾಗಿದೆ.
https://www.suddikanaja.com/2021/11/23/jobs-on-degree-all-institute-of-speech-and-hearing/