ಸುದ್ದಿ ಕಣಜ.ಕಾಂ | TALUK | COURT NEWS
ಶಿವಮೊಗ್ಗ: ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹60,000 ದಂಡ ವಿಧಿಸಿ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.
ಸಾಗರ ಪಟ್ಟಣದ ರಾಮನಗರ ನಿವಾಸಿ ಅನಿಲ್ ಅಲಿಯಾಸ್ ಅನಿಲ್ ಡಿಸೋಜಾ (26) ಎಂಬಾತನಿಗೆ ಶಿಕ್ಷೆ ವಿಧಿಸಿ ಸಾಗರದ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಮಹಾಂತಪ್ಪ ಆದೇಶ ಹೊರಡಿಸಿದ್ದಾರೆ.
READ | ವಿಧಾನ ಪರಿಷತ್ ಚುನಾವಣೆಗೆ ಬಿಗಿ ಪೊಲೀಸ್ ಭದ್ರತೆ, ಎಷ್ಟು ವಾಹನ, ಸಿಬ್ಬಂದಿ ನಿಯೋಜನೆ?
ಅತ್ಯಾಚಾರ ಮಾಡಿ ಬೆದರಿಕೆ ಒಡ್ಡಿದ ಆರೋಪಿ
2017ರ ಏಪ್ರಿಲ್ 17ರಂದು ಸಾಗರ ಟೌನ್ ನಿವಾಸಿಯಾದ ಮಹಿಳೆಯೊಬ್ಬರನ್ನು ಆಕೆ ಕೆಲಸ ಮಾಡುತ್ತಿದ್ದ ಹೋಟೆಲ್ ನಲ್ಲಿ ರಾತ್ರಿ ಕರ್ತವ್ಯಕ್ಕೆ ಕರೆಯಲಾಗಿದೆ. ಆಕೆಯನ್ನು ಮನೆಯಿಂದ ಆಟೋದಲ್ಲಿ ಕೂರಿಸಿಕೊಂಡು ಹೋಗಿ, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಮಾಡಿದ್ದಾನೆ. ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ.
ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ
ಅನಂತರ, ಅತ್ಯಾಚಾರಕ್ಕೆ ಒಳಗಾದ ಮಹಿಳೆಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆಸ್ಪತ್ರೆಯಲ್ಲಿ ತೋರಿಸಿದಾಗ ಗರ್ಭಿಣಿಯಾಗಿರುವುದು ತಿಳಿದು ಬಂದಿರುತ್ತದೆ ಎಂದು ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಅಕ್ಟೋಬರ್ 15ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 376(2)(ಎನ್) ಐ.ಪಿ.ಸಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.
ಸದರಿ ಪ್ರಕರಣದ ತನಿಖೆಯನ್ನು ಸಾಗರ ಗ್ರಾಮಾಂತರ ವೃತ್ತದ ಸಿಪಿಐ ಇ.ಓ.ಮಂಜುನಾಥ್ 2018ರ ಫೆಬ್ರವರಿ 1ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಒಂದುವೇಳೆ, ದಂಡವನ್ನು ಕಟ್ಟದಿದ್ದರೆ 2 ವರ್ಷಗಳ ಸಾದಾ ಕಾರವಾಸ ಶಿಕ್ಷೆ ಹಾಗೂ ದಂಡದ ಮೊತ್ತದಲ್ಲಿ ನೊಂದ ಮಹಿಳೆಗೆ ಪರಿಹಾರವಾಗಿ ₹50,000 ಪಾವತಿ ಮಾಡಲು ಆದೇಶ ನೀಡಲಾಗಿದೆ.
https://www.suddikanaja.com/2021/10/09/unknown-person-frauded-woman/