ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಜಿಂಕೆಯ ಮಾಂಸ ಮತ್ತು ಚರ್ಮವನ್ನು ಹೊಂದಿದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬೇಧಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಸಗೋಡಿನಲ್ಲಿ ಜಿಂಕೆ ಮತ್ತು ಮಾಂಸವನ್ನು ಶೇಖರಿಸಲಾಗಿತ್ತು. ಖಚಿತ ಮೇಲೆ ಕಾರ್ಯಾಚರಣೆ ಮಾಡಲಾಗಿದೆ.
READ | ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಗ್ರಿ ಪಾಸಾದವರಿಗೆ ಐಓಸಿಎಲ್ ನಲ್ಲಿ ಭರ್ಜರಿ ಉದ್ಯೋಗ ಅವಕಾಶ
ಬಳಸಗೋಡು ಗ್ರಾಮದ ಗಾಮಪ್ಪ ಬಂಧಿತ ಆರೋಪಿ. ಇನ್ನೊಬ್ಬ ಆರೋಪಿ ಪ್ರಶಾಂತ್ ತಪ್ಪಿಸಿಕೊಂಡಿದ್ದಾನೆ. ಈತನ ಶೋಧ ಕಾರ್ಯ ನಡೆದಿದೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಎಸಿಎಫ್ ಶ್ರೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.