ಐಟಿಐ ಪಾಸ್ ಆದವರಿಗೆ HAL ನಲ್ಲಿ ಉದ್ಯೋಗ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇವರು ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಷಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದಾರೆ.
ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಓಪಿಎ, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್ ಈ ಟ್ರೇಡ್‍ಗಳಿಗೆ ಅಪ್ರೆಂಷಿಪ್ ತರಬೇತಿ ನೀಡಲಾಗುವುದು.

READ | ಫ್ರೀಡಂ ಪಾರ್ಕ್‍ನಲ್ಲಿ ಡಾಗ್ ಶೋ, ರಕ್ಷಿತ್ ಶೆಟ್ಟಿ ಜೊತೆ ನಟಿಸಿದ `ಚಾರ್ಲಿ’ ಜೊತೆ ಸೆಲ್ಫಿ

ಅಭ್ಯರ್ಥಿಗಳು ದಾಖಲೆಗಳನ್ನು ಸಲ್ಲಿಸಿ
ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಮತ್ತು ಐಟಿಐ ಮಾರ್ಕ್ಸ್‌ ಕಾರ್ಡ್, ಜಾತಿ ಪ್ರಮಾಣಪತ್ರ, ಆಧಾರ್ ಮತ್ತು ಪಾನ್ ಕಾರ್ಡ್, ಎನ್‍.ಸಿವಿಟಿ ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ ಮತ್ತು ಎಂಪ್ಲಾಯ್‍ಮೆಂಟ್ ಕಾರ್ಡ್ ಈ ಎಲ್ಲ ದಾಖಲೆಗಳನ್ನು ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪಾನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಡಿಸೆಂಬರ್ 28 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂರವಾಣಿ ಸಂಖ್ಯೆ 08182-255293, 9482023412, 9535312531 ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

https://www.suddikanaja.com/2021/11/03/npcil-recruitment-in-for-iti-candidates/