ಸುದ್ದಿ ಕಣಜ.ಕಾಂ | KARNATAKA | LAW UNIVERSITY
ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ನಡೆಸುತ್ತಿರುವುದರ ವಿರುದ್ಧ ಕಾನೂನು ವಿದ್ಯಾರ್ಥಿಗಳು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವಾರವಷ್ಟೇ ಮೂರು ವರ್ಷದ ಕೋರ್ಸ್ ಪರೀಕ್ಷೆ ನಡೆಸದಂತೆ ನ್ಯಾಯಾಲಯ ತಡೆ ನೀಡಿದೆ. ಆದರೂ ಯಾವುದೇ ಪಾಠಗಳನ್ನು ನಡೆಸದೇ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯ ಮುಂದಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
VIDEO REPORT
ಕುಲಪತಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
ಹಲವು ದಿನಗಳಿಂದ ವಿಶ್ವವಿದ್ಯಾಲಯದ ಆವರಣದಲ್ಲೇ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿಗಳು ವಿವಿಯ ವಿರುದ್ಧ ಪ್ರತಿಭಟನೆ ಮಾಡಿದರು.