ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 26 ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರು ಸ್ಥಾವನ, ಹಾಲಲಕ್ಕವಳ್ಳಿ, ಕಡೆಕಲ್, ಯಗರನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶದ ವ್ಯಾಪ್ತಿಗೊಳಪಡುವ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.