ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಚೆಕ್ ಬೌನ್ಸ್ ಕೇಸ್ ವಾಪಸ್ ಪಡೆಯುವಂತೆ ಮಹಿಳೆಗೆ ಅಶ್ಲೀಲ ಫೋಟೊ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ಪುರುಷನ ವಿರುದ್ಧ ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯು ವ್ಯಕ್ತಿಯೊಬ್ಬರಿಗೆ ಹಣ ನೀಡಿದ್ದು, ಪ್ರತಿಯಾಗಿ ಚೆಕ್ಗಳನ್ನು ನೀಡಿದ್ದಾರೆ. ಆದರೆ, ಅವುಗಳು ಬೌನ್ಸ್ ಆಗಿವೆ. ಈ ಬಗ್ಗೆ ದೂರು ನೀಡಿದ್ದಾರೆ. ಅದು ವಿಚಾರಣೆ ಹಂತದಲ್ಲಿದೆ. ಈ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಮಹಿಳೆಯ ಚಿತ್ರದೊಂದಿಗೆ ಅಶ್ಲೀಲ ಚಿತ್ರ ಮಿಕ್ಸಿಂಗ್ ಮಾಡಿದ್ದಾರೆ. ಮಹಿಳೆಗೆ ಆ ಚಿತ್ರವನ್ನು ವಾಟ್ಸಾಪ್ ಮೂಲಕ ಕಳುಹಿಸಿದ್ದು, ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಶಿವಮೊಗ್ಗ ಸಿ.ಇ.ಎನ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.