Jobs in Shivamogga, ಶಿವಮೊಗ್ಗದಲ್ಲಿ ಸರ್ಕಾರಿ ಉದ್ಯೋಗ, ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ, ಮಾಹಿತಿಗಾಗಿ ಕ್ಲಿಕ್ಕಿಸಿ

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರ(ಸ್ಟೆನೋಗ್ರಾಫರ್) 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/shivamogga-onlinerecruitment ಅಥವಾ  https://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಡಿಸೆಂಬರ್ 27 ರಿಂದ 2022 ರ ಜನವರಿ 30ರ ರಾತ್ರಿ 11.59ರ ವರೆಗೆ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ವಿದ್ಯಾರ್ಹತೆ

ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿಬೇಕು.
ಅಭ್ಯರ್ಥಿಯ ವಯೋಮಿತಿ
ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗಕ್ಕೆ 35 ವರ್ಷಗಳು, 2ಎ, 2ಬಿ, 3ಎ, 3ಬಿ ಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ 40 ವರ್ಷ ಗರಿಷ್ಠ ವಯೋಮಿತಿ ಇರುತ್ತದೆ.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂಪಾಯಿ, ಪ್ರವರ್ಗ-2ಎ, 2ಬಿ ಮತ್ತು 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಆನ್ ಲೈನ್ ಅರ್ಜಿ ಸಲ್ಲಿಕೆ, ಸೂಚನೆಗಳು, ವಯೋಮಿತಿ ಸಡಿಲಿಕೆ, ಹುದ್ದೆ ವರ್ಗೀಕರಣ, ಆಯ್ಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್ ಸೈಟ್ ಅನ್ನು ಸಂಪರ್ಕಿಸಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫ ಹುಸೇನ್ ಎಸ್.ಎ ತಿಳಿಸಿದ್ದಾರೆ.

https://www.suddikanaja.com/2021/12/14/jobs-in-shivamogga/