ಶಿವಮೊಗ್ಗ ನ್ಯಾಯಾಲಯ ನೇಮಕಾತಿಯಲ್ಲಿ ಕೆಲ ಬದಲಾವಣೆ, ಅರ್ಜಿ ಸಲ್ಲಿಸುವ ಮುನ್ನ ಓದಿ

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅಧಿಸೂಚನೆಯ ಐದು ಮತ್ತು ಆರನೇ ಪುಟದಲ್ಲಿ ಕ್ರಮವಾಗಿ ಕಾಲಂ 18, 19 ಮತ್ತು 20 ‘ಆಯ್ಕೆ ವಿಧಾನ’ದಲ್ಲಿ ತಿದ್ದುಪಡಿ ಮಾಡಿ ಆದೇಶಿಸಿದೆ.

ಏನೇನು ಬದಲಾವಣೆ?

(3) ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. (4) ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. (5) ಸಂದರ್ಶನಕ್ಕೆ 10 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎ.ಮುಸ್ತಫ ಹುಸೇನ್ ತಿಳಿಸಿದ್ದಾರೆ.