ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಕೆಲಸದ ಪ್ರಯುಕ್ತ ನೈಜೇರಿಯಾಕ್ಕೆ ಹೋಗಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಈತನೊಂದಿಗೆ ಸಂಪರ್ಕ ಹೊಂದಿದ್ದ ಪತ್ನಿ ಮತ್ತು ಮಗನನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ನೈಜೇರಿಯಾಕ್ಕೆ ಹೋಗಿದ್ದ ವ್ಯಕ್ತಿಯು ಕಳೆದ ವಾರ ಬೆಂಗಳೂರಿನ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇಲ್ಲಿಯೇ ಇದ್ದು ನಂತರ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿದ್ದಾನೆ. ಬೆಂಗಳೂರಿನ ಖಾಸಗಿ ಲಾಡ್ಜ್ ವೊಂದರಲ್ಲಿದ್ದಾಗ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಪಾಸಿಟಿವ್ ವರದಿ ಬಂದಿದ್ದೇ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಪತ್ನಿ ಕೂಡ ಬೆಂಗಳೂರಿಗೆ ಹೋಗಿದ್ದಾರೆ. ನಂತರ ಅರರೆಲ್ಲರೂ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದಾರೆ.
ಹುಡಕಬೇಕಿದೆ ಪ್ರಾಥಮಿಕ ಸಂಪರ್ಕ
ಒಂದು ವಾರ ನಾನಾ ಕಡೆಗಳಲ್ಲಿ ಸೋಂಕಿತ ವ್ಯಕ್ತಿಯು ಓಡಾಡಿದ್ದು ಕುಟುಂಬದವರು ಪ್ರಾಥಮಿಕ ಸಂಪರ್ಕದಲ್ಲಿದ್ದರು. ಅವರು ಸಹ ಶಿವಮೊಗ್ಗದ ಹಲವರ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ. ಸೋಂಕಿತ ವ್ಯಕ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಕುಟುಂಬದವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
https://www.suddikanaja.com/2021/03/12/south-africa-corona-moderate-virus-found-in-shivamogga/