ಉದ್ಯೋಗ ಆಕಾಂಕ್ಷಿಗಳಿಗೆ ಭೂದಾಖಲೆಗಳ ಇಲಾಖೆ ಶಾಕ್, ನೇಮಕಾತಿ ಆದೇಶ ವಾಪಸ್

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ರಾಜ್ಯದಲ್ಲಿ ಮೂರು ಸಾವಿರ ಹುದ್ದೆಗಳ ನೇಮಕಾತಿಗೆ ಕರೆಯಲಾಗಿದ್ದ ಅಧಿಸೂಚನೆಯನ್ನು ವಾಪಸ್ ಪಡೆಯುವ ಮೂಲಕ ಉದ್ಯೋಗ ಆಕಾಂಕ್ಷಿಗಳಿಗೆ ಶಾಕ್ ನೀಡಿದೆ.
ಈಗಾಗಲೇ ಹಲವೆಡೆ ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ, ನೇಮಕಾತಿ ಅಧಿಸೂಚನೆಯನ್ನೇ ವಾಪಸ್ ಪಡೆದಿದೆ.

READ | ಪರವಾನಗಿ ಭೂಮಾಪಕರ ಹುದ್ದೆಗಳ ನೇಮಕಾತಿ, ಎಷ್ಟು ಹುದ್ದೆಗಳ ಭರ್ತಿ

ನೇಮಕಾತಿ‌ ಅಧಿಸೂಚನೆ ಹಿಂಪಡೆಯಲು ಕಾರಣ?
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಆದರೆ, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಅಧಿಸೂಚನೆ ಹಿಂಪಡೆಯಲಾಗಿದೆ ಎಂದು ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

error: Content is protected !!