ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ನಗರ ಉಪ ವಿಭಾಗ 3 ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಸರಿಪಡಿಸಲು ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಡಿಸೆಂಬರ್ 14ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12ರ ವರೆಗೆ ಜನಸಂಪರ್ಕ ಸಭೆ ಆಯೋಜಿಸಲಾಗಿದೆ.
ಎಸ್.ವಿ. ಬಡಾವಣೆಯ ಗುಡ್ಲಕ್ ಸರ್ಕಲ್ ಸಮೀಪದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸಿದೆ ಈ ಭಾಗದ ಸಾರ್ವಜನಿಕರು ತಮ್ಮ ಕುಂದುಕೊರತೆ ಅಹವಾಲುಗಳನ್ನು ಸಲ್ಲಿಸಿ, ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.