ಶಿವಮೊಗ್ಗ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ದಿಢೀರ್ ಸಾವು

 

 

ಸುದ್ದಿ ಕಣಜ.ಕಾಂ | CITY | DEATH NEWS
ಶಿವಮೊಗ್ಗ: ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರೊಬ್ಬರು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ.

ಮೊಯಿದ್ದೀನ್ (42) ಎಂಬುವವರು ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಕರ್ತವ್ಯದ ವೇಳೆ ಪಾಲಿಕೆ ಆವರಣದಲ್ಲಿರುವ ಜನನ ಮತ್ತು ಮರಣ ವಿಭಾಗದಿಂದ ಪರಿಷತ್ ಸಭಾಂಗಣದ ಕಡೆಗೆ ನಡೆದುಕೊಂಡು ಹೋಗುವಾಗ ದಿಢೀರ್ ಕುಸಿದು ಬಿದಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

error: Content is protected !!