ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಕುವೆಂಪುನಗರದ ಡಿವಿಎಸ್ ಬಡಾವಣೆ ಹತ್ತಿರ ಬೈಕ್ ನಲ್ಲಿ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಗುರುವಾರ ಬಂಧಿಸಲಾಗಿದೆ.
ತಾಲೂಕಿನ ಬೀರನಕೆರೆ ತಾಂಡಾ ನಿವಾಸಿಗಳಾದ ಕೌಶಿಕ್ (21), ಯುವರಾಜ್ (23), ವಿನೋದ್ (24) ಬಂಧಿತರು. ಆರೋಪಿಗಳಿಂದ ಒಟ್ಟು 435 ಗ್ರಾಂ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ 2 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾರ್ವಜನಿಕರಿಗೆ ಒಣ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.