ಸುದ್ದಿ ಕಣಜ.ಕಾಂ | TALUK | CRIME NEWS
ಶಿಕಾರಿಪುರ: ಪಟ್ಟಣದ ಕುಂಬಾರಗುಂಡಿ ಆಜಾದ್ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲಿಸರು ಭಾನುವಾರ ಬಂಧಿಸಿದ್ದಾರೆ.
READ | ಮುದ್ರಾ ಯೋಜನೆ ಅಡಿ ಸಾಲ ಕೊಡಿಸುವುದಾಗಿ ನಂಬಿಸಿ ಮೋಸ
ಕುಂಬಾರಗುಂಡಿ ನಿವಾಸಿಗಳಾದ ಯಸಿರ್ ಪಾಶಾ(27) ಮತ್ತು ಶಹನಾಜ್ ಬೇಗಂ(52) ಎಂಬುವವರನ್ನು ಬಂಧಿಸಲಾಗಿದೆ. ಅವರಿಂದ ₹1,11,000 ಮೌಲ್ಯದ ಒಟ್ಟು 4 ಕೆಜಿ 400 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಶಿಕಾರಿಪುರ ವೃತ್ತದ ಸಿಪಿಐ ಮತ್ತು ಸಿಬ್ಬಂದಿಯ ತಂಡವು ದಾಳಿ ನಡೆಸಿದೆ. ಆ ವೇಳೆ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.